ಡಿ.ಕೆ.ಶಿವಕುಮಾರ್, ಲಕ್ಷ್ಮಣ ಸವದಿ ಗೌಪ್ಯ ಸಭೆ

78d3671020ed3e75c42c4c7b45342d1f1685091296232637_original.jpg
Published on


ಬೆಳಗಾವಿ:ಕಿತ್ತೂರು ಕರ್ನಾಟಕ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮೇ 31ರಂದು ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿ ಪಕ್ಷದ ಮುಖಂಡರು, ಶಾಸಕರೊಂದಿಗೆ ಸಭೆ ಹಮ್ಮಿಕೊಂಡಿದ್ದಾರೆ.
ಮೇ 31ರಂದು ಬೆಳಗ್ಗೆ  8 ಗಂಟೆಗೆ ನಗರದಲ್ಲಿರುವ ಶಾಸಕ ಲಕ್ಷ್ಮಣ ಸವದಿ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಜತೆಗೆ ಕಾಂಗ್ರೆಸ್ ಪಕ್ಷದ ಮುಖಂಡರು, ಶಾಸಕರು ಸಹ ಭಾಗವಹಿಸಲಿದ್ದಾರೆ. ಬಳಿಕ ವಿಶೇಷ ವಿಮಾನ ಮೂಲಕ ಹುಬ್ಬಳ್ಳಿಗೆ ತೆರಳಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರೊಂದಿಗೆ ಸಭೆ ನಡೆಸಲಿದ್ದಾರೆ. ತದನಂತರ ಬೆಂಗಳೂರಿಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net