ಡಿ.ಎಂ. ಸಾಲಿಗೆ ಗೌಡಾ ಪ್ರದಾನ

GOUDA
Published on

ರಟ್ಟಿಹಳ್ಳಿ: ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆ ಪರಿಗಣಿಸಿ ಮಾಜಿ ಮುಖ್ಯ ಸಚೇತಕ, ಪಟ್ಟಣದ ಪ್ರಿಯದರ್ಶಿನಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಿ.ಎಂ. ಸಾಲಿ ಅವರಿಗೆ ಏಷಿಯಾ ಇಂಟರ್‌ನ್ಯಾಷನಲ್ ಕಲ್ಚರ್ ರೀಸರ್ಚ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.


ತಮಿಳುನಾಡಿನ ಹೊಸೂರಿನಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಗಿದೆ. ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಟ್ಟಣದಲ್ಲಿ ಪದವಿ ಕಾಲೇಜು ಆರಂಭಿಸಿ ಅನೇಕ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ದಾರಿದೀಪವಾಗಿದ್ದಾರೆ.

ಮುಖ್ಯ ಸಚೇತಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ತಾಲೂಕಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net