ಡಿ. 19ರಂದು ಮೆಗಾ ಲೋಕ ಅದಾಲತ್

High Court Logo
Published on

ಬೆಳಗಾವಿ: ವ್ಯಾಜ್ಯವನ್ನು ಅತ್ಯಂತ ಕಡಿಮೆ ಖರ್ಚಿನಲ್ಲಿ ಹಾಗೂ ಶೀಘ್ರ ಇತ್ಯರ್ಥಪಡಿಸಿಕೊಳ್ಳಲು ಅನುಕೂಲವಾಗುವಂತೆ ಡಿ. 19ರಂದು ಜಿಲ್ಲೆಯ ಎಲ್ಲ ನ್ಯಾಯಾಲ ಯಗಳ ಸಂಕೀರ್ಣ ಗಳಲ್ಲಿ ಮೆಗಾ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಪ್ರಧಾನ, ಸತ್ರ ನ್ಯಾಯಾಧೀಶ ಸಿ.ಎಂ.ಜೋಶಿ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕು ಕಾನೂನು ಸೇವಾ ಸಮಿತಿ ಸಂಯುಕ್ತಾಶ್ರಯದಲ್ಲಿ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಲೋಕ ಅದಾಲತ್‌ನಲ್ಲಿ ಯಾವುದೇ ಒಂದು ಪ್ರಕರಣದ ಉಭಯ ಪಕ್ಷಗಾರರಲ್ಲಿ ರಾಜಿ ಸಂಧಾನ ಮೂಲಕ ಪ್ರಕರಣ ಇತ್ಯರ್ಥಗೊಳಿಸಲಾಗುವುದು ಎಂದರು. ಅದಾಲತನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡಲು ಪ್ರತಿದಿನ 4 ಗಂಟೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಎಡಿಆರ್, ಬಿಲ್ಡಿಂಗ್ ಬೆಳಗಾವಿ ಹಾಗೂ ತಾಲೂಕಿನ ಎಲ್ಲ ನ್ಯಾಯಾಲಯಗಳಲ್ಲಿ ಪ್ರಿ ಕನ್ಸಿಲೇಷನ್ ಬೈಠಕ್ ಏರ್ಪಡಿಲಾಗಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ ಅರಸ, ಕಾನೂನು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಮಾಹಿತಿಗೆ ದೂ: 0831-2423216 ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿ ಸಂಪರ್ಕಿಸುವಂತೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net