

ಧಾರವಾಡ: ನಗರದ ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಅ. 26ರಂದು ಸಂಜೆ 5 ಗಂಟೆಗೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ವರಕವಿ ಡಾ. ದ.ರಾ. ಬೇಂದ್ರೆ ಅವರ 44ನೇ ಪುಣ್ಯಸ್ಮರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭಾ ಅತಿಥಿಯಾಗಿ ಬಾಗವಹಿಸುವರು. ಟ್ರಸ್ಟ್ ಅಧ್ಯಕ್ಷ ಡಾ. ಸರಜೂ ಕಾಟ್ಕರ್ ಅಧ್ಯಕ್ಷತೆ ವಹಿಸುವರು. ನಂತರ ವಿದುಷಿ ರಾಧಾ ದೇಸಾಯಿ ಮತ್ತು ವೃಂದದಿ0ದ ಬೇಂದ್ರೆಯವರ ಗೀತೆಗಳ ಗಾಯನ ಪ್ರಸ್ತುತಪಡಿಸುವರು.