ಡಿ.ಎಸ್.ಹೂಲಗೇರಿ 1200 ಕೋಟಿ ರೂ. ತಂದಿದ್ದಾರೆ

Published on

ಲಿಂಗಸುಗೂರು: ಬಿಜೆಪಿ ಸರ್ಕಾರವಿದ್ದಾಗ ಶಾಸಕರಾಗಿದ್ದ ಡಿ.ಎಸ್.ಹೂಲಗೇರಿ ಅವರು 1200 ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ಅವರು ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಸತೀಶ ಜಾರಕಿಹೊಳಿ ಅವರಿಗೆ ಸರ್ಕೀಟ್ ಹೌಸ್ ನಿರ್ಮಿಸಲು ಡಿ.ಎಸ್.ಹೂಲಗೇರಿ ಅವರು 5 ಕೋಟಿ ರೂ. ನೀಡುವಂತೆ ಕೋರಿದ್ದರು. ಆ ಪೈಕಿ 4 ಕೋಟಿ ರೂ. ಕೊಟ್ಟಿದ್ದಾರೆ. ಸಂಸದರನ್ನು ಭೇಟಿ ಮಾಡಿ ಶಾದಿಮಹಲ್‌ಗಳ ನಿರ್ಮಾಣಕ್ಕೆ ಅನುದಾನ ಕೇಳಿದ್ದಾರೆ. 100 ಬೆಡ್ ಹಾಸಿಗೆ ಆಸ್ಪತ್ರೆ ಕಟ್ಟಡಕ್ಕೆ ಹೂಲಗೇರಿ ಅವಧಿಯಲ್ಲಿ ಭೂಮಿ ಪೂಜೆ ಮಾಡಲಾಗಿದೆ.

ನ್ಯಾಯಾಲಯ ಸಂಕೀರ್ಣ ಕಟ್ಟಡ ಕೆಲಸ ಆಗಿದೆ ಎಂದರು. ಸರ್ಕಾರದಿಂದ ಅನುದಾನ ತಂದು ಅಭಿವೃದ್ಧಿ ಮಾಡುವುದು ಶಾಸಕರ ಕೆಲಸ. ನೆಪ ಹೇಳಬಾರದು. ಹೂಲಗೇರಿ ಹಾಗೂ ಮಾನಪ್ಪ ವಜ್ಜಲ್ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳ ಪಟ್ಟಿ ತೋರಿಸಲು ಬಿಜೆಪಿ ಜಿಲ್ಲಾಧ್ಯಕ್ಷರು ಜನರ ಮುಂದಿಡಲಿ ಎಂದು ಸವಾಲು ಹಾಕಿದರು.

ಎಪಿಎಂಸಿ ಅಧ್ಯಕ್ಷ ಅಮರೇಶ ಹೆಸರೂರು, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಹ್ಮದ ರಫಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶಿವಣ್ಣ ನಾಯಕ ಕೋಠಾ, ಪ್ರಧಾನ ಕಾರ್ಯದರ್ಶಿ ಬಸವರಾಜ ಜೆಲ್ಲಿ, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ವೆಂಕಟೇಶ ಗುತ್ತೇದಾರ, ಪದವೀಧರ ವಿಭಾಗ ಅಧ್ಯಕ್ಷ ಸಂಜೀವಪ್ಪ ಹುನಕುಂಟಿ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಖಾಜಾಹುಸೇನ, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಗಂಗಮ್ಮ ಕಟ್ಟಿಮನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net