ಅಂಜುವುದಿಲ್ಲ, ಅಳುಕುವುದಿಲ್ಲ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

DVS
ಸಂಗ್ರಹ ಚಿತ್ರ
Published on

ಬೆಂಗಳೂರು: ರೈತರಿಗೆ ಸ್ವಾವಲಂಬಿ, ಸ್ವಾಭಿಮಾನ ಹಾಗೂ ಸದೃಢ ಬದುಕು ಕಟ್ಟಿಕೊಡುವಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಅಚಲವಾಗಿದ್ದು, ಯಾವುದೇ ಪ್ರತಿಭಟನೆ, ಬೆದರಿಕೆಗೆ ಅಂಜುವುದಿಲ್ಲ, ಅಳುಕುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ವಿಕಾಸ ಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ವಿಧೇಯಕ, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ ವಿಧೇಯಕ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ವಿಧೇಯಕಗಳು ರೈತಪರವಾಗಿವೆ. ಕಾಂಗ್ರೆಸ್ ನ ಅಪಪ್ರಚಾರಕ್ಕೆ ಹೆದರುವುದಿಲ್ಲ ಎಂದು ತಿಳಿಸಿದರು.

ಎಪಿಎಂಸಿ ಹಾಗೂ ಕೃಷಿ ವಿಚಾರ ರಾಜ್ಯಕ್ಕೆ ಸೇರಿದ್ದರೂ ಕೇಂದ್ರ ನೆರವು ನೀಡಬಾರದೆಂದಿಲ್ಲ. ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ಜು ರೈತರ ಹಿತದೃಷ್ಟಿಯಿಂದ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net