ಡಾ. ಪ್ರಭಾಕರ ಭಟ್ ವಿರುದ್ಧ ಕೇಸು ದಾಖಲು -ದ.ಕ.ಜಿಲ್ಲಾ ಬಿಜೆಪಿ ಖಂಡನೆ

ffffffffff
Published on


ಮಂಗಳೂರು : ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟಾಗುವಂತೆ ಭಾಷಣ ಮಾಡಿದ್ದಾರೆ ಎನ್ನುವ ನೆಪವೊಡ್ಡಿ ಡಾ.ಪ್ರಭಾಕರ ಭಟ್ ವಿರುದ್ಧ ಕೇಸು ದಾಖಲಿಸಿರುವುದನ್ನು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.
ತ್ರಿವಳಿ ತಲಾಖ್ ಎನ್ನುವ ಪದ್ದತಿಯಿಂದ ಮುಸ್ಲಿಂ ಮಹಿಳೆಯರ ಬಾಳು ಹಾಳಾದಾಗ ಮಾತನಾಡದವರು ಇವತ್ತು ಮಹಿಳೆಯರ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ. ನರೇಂದ್ರ ಮೋದಿ ಸರ್ಕಾರ ತ್ರಿವಳಿ ತಲಾಖ್ ನಿಷೇಧಿಸಿದ್ದರಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆ ದೊರೆತಿದೆ ಎನ್ನುವುದು ಡಾ.ಪ್ರಭಾಕರ ಭಟ್ ಭಾಷಣದ ತಾತ್ಪರ್ಯವಾಗಿತ್ತು. ಆದರೆ ಕಾಂಗ್ರೆಸ್ ಅಧಿಕಾರ ಬಂದಾಗಲೆಲ್ಲಾ ಹಿಂದು ಕಾರ್ಯಕರ್ತರನ್ನು, ಪ್ರಮುಖರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net