ಎಸ್‌ಡಿಪಿಐ ಜತೆ ಕಾಂಗ್ರೆಸ್ ಒಳ ಒಪ್ಪಂದ ದ.ಕ. ಜಿಲ್ಲಾ ಬಿಜೆಪಿ ಟೀಕೆ

arun
Published on


ಮಂಗಳೂರು : ಮತೀಯವಾದಿ ಎಸ್‌ಡಿಪಿಐ ಜತೆ ಒಳ ಒಪ್ಪಂದ ಮಾಡಿಕೊಂಡಿರುವ ಕಾಂಗ್ರೆಸ್ ಒಂದಷ್ಟು ಗ್ರಾಮ ಪಂಚಾಯಿತಿ ಸ್ಥಾನಗಳನ್ನು ಗೆದ್ದಿದೆ. ಇದನ್ನು ತಮ್ಮದೇ ದೊಡ್ಡ ಗೆಲುವು ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿರುವುದು ಹಾಸ್ಯಾಸ್ಪದ .
ಮತೀಯವಾದಿಗಳೊಂದಿಗೆ ಸೇರಿ ಚುನಾವಣೆ ಎದುರಿಸುವ ದಯನೀಯ ಸ್ಥಿತಿಗೆ ಕಾಂಗ್ರೆಸ್ ಇಳಿದಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಅರುಣ್.ಜಿ.ಶೇಟ್ ಟೀಕಿಸಿದ್ದಾರೆ.
ಸಂಘಟನಾತ್ಮಕವಾಗಿ ಸುಭದ್ರವಾಗಿರುವ ಬಿಜೆಪಿ ಕಳೆದ ಲೋಕಸಭಾ ಚುನಾವಣೆ ಗೆದ್ದ ಬಳಿಕ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಹಾಗೂ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗಳಲ್ಲಿ ಪ್ರಚಂಡ ಜಯ
ಸಾಧಿಸುವ ಮೂಲಕ ಬಿಜೆಪಿಗೆ ದ.ಕ. ಜಿಲ್ಲೆ ಭದ್ರನೆಲೆ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ. ಮುಂದಿನ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಜಯ ದಾಖಲಿಸಲು ಶಕ್ತವಾಗಿದೆ. ಆದರೆ ಅದೇ ಕಾಂಗ್ರೆಸ್ ಚುನಾವಣೆ ಎದುರಿಸಲು ಹೆದರಿ ಚುನಾವಣೆ ಮುಂದೂಡುವ ಯೋಚನೆ ನಡೆಸುತ್ತಿದೆ ಎಂದು ಅವರು ಪತ್ರಿಕಾ ಹೇಳಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net