

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಘಟಿಸಲಾದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ತ್ರೋಬಾಲ್, ಫುಟ್ಬಾಲ್ ಹಾಗೂ ಯೋಗ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.
ದಸರಾ ಕ್ರೀಡಾಕೂಟದ ಹಾಕಿ, ಬಾಸ್ಕೆಟ್ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹ್ಯಾಂಡ್ಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾಗುವುದರಿಂದ ಈ ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ಕ್ರೀಡಾಪಟುಗಳು ನೇರವಾಗಿ ಜಿಲ್ಲಾ ಮಟ್ಟದ ಕ್ರೀಡಾಕೂಟ ದಿನದಂದು ಭಾಗವಹಿಸಬೇಕು. ಟೆನ್ನಿಸ್, ನೆಟ್ ಬಾಲ್ ಮತ್ತು ಈಜು ಕ್ರೀಡೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ನೋಡೆಲ್ ಅಧಿಕಾರಿ ವಿನೋದ್ ಕುಮಾರ್ ( 9845026869) ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ. ಜಿಲ್ಲೆ, ಮಂಗಳೂರು (ದೂರವಾಣಿ : 0824-2451264) ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.