

ಮಂಗಳೂರು : ಮುಸ್ಲಿಂ ಓಟ್ ಬ್ಯಾಂಕ್‌ಗೋಸ್ಕರ ಸಿದ್ದರಾಮಯ್ಯ ದೇಶಭಕ್ತ ಸಂಘಟನೆ ಆರ್‌ಎಸ್‌ಎಸ್ ಬಗ್ಗೆ ಕೀಳಾಗಿ ಮಾತನಾಡುತ್ತಿರುವುದು ಖಂಡನೀಯ. ದೇಶದಲ್ಲಿ ಪಿಎಫ್‌ಐಯಂತಹ ಸಂಘಟನೆಗಳ ಹುಟ್ಟು ಮತ್ತು ಬೆಳವಣಿಗೆಗೆ ಸಹಕಾರ ನೀಡಿದ್ದೇ ಕಾಂಗ್ರೆಸ್. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಿಎಫ್‌ಐ ಕಾರ್ಯಕರ್ತರ ಮೇಲಿನ ಕೇಸ್‌ಗಳನ್ನು ಖುಲಾಸೆಗೊಳಿಸಿ ಪರೋಕ್ಷ ಬೆಂಬಲ ನೀಡಿದ ಪರಿಣಾಮ ಕರ್ನಾಟಕದಲ್ಲಿ ಪಿಎಫ್‌ಐ ಬೇರೂರಲು ಸಹಕಾರಿಯಾಗಿದೆ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿದ್ದಾರೆ.
ಆರ್‌ಎಸ್‌ಎಸ್ ರಾಷ್ಟ್ರ ರಕ್ಷಣೆಗಾಗಿ ಸ್ಥಾಪನೆಯಾದ ಸಂಘಟನೆ. ಆರ್‌ಎಸ್‌ಎಸ್ ದೇಶಕ್ಕೆ ಕೊಟ್ಟಿರುವ ಕೊಡುಗೆ ಏನೆಂದು ದೇಶದ ಜನರಿಗೆ ತಿಳಿದಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಆರ್‌ಎಸ್‌ಎಸ್ ಸ್ವಯಂ ಸೇವಕರಿಗೆ ಭಾಗವಹಿಸಲು ಅವಕಾಶ ಕಲ್ಪಿಸಿದ ಇತಿಹಾಸ ಇದೆ. ದೇಶದ್ರೋಹಿ ಸಂಘಟನೆ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ದ.ಕ.ಜಿಲ್ಲಾ ಬಿಜೆಪಿ ಅಭಿನಂದಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.