

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಕ್ಲೀನ್ ಸಿದ್ದರಾಮಯ್ಯ ಎಂದು ತನ್ನನ್ನು ಕರೆಸಿಕೊಂಡಿದ್ದರೆ, ಎರಡನೇ ಅವಧಿಯಲ್ಲಿ ಸ್ಕ್ಯಾಮ್ ಸಿದ್ದರಾಮಯ್ಯ ಆಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಿತ್ಯ ಬೆಲೆ ಏರಿಕೆಯಾಗುತ್ತಿದೆ. ಹಾಲು, ಪೆಟ್ರೋಲ್, ಡೀಸೆಲ್, ಮದ್ಯದ ಬೆಲೆ ಹೆಚ್ಚಳವಾಗಿದೆ. ವಿದ್ಯುತ್ ಟ್ರಾನ್‌ಸ್ಾರ್ಮರ್ ಅಳವಡಿಕೆ ಶುಲ್ಕ, ಭೂ ನೋಂದಣಿ ಶುಲ್ಕ ಭಾರಿ ಏರಿಕೆ ಆಗಿದೆ. ಮುಂದಿನ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ಸಚೇತಕ ಎನ್. ರವಿಕುಮಾರ್ ಹೇಳಿದರು.
ನಗರದ ಸಂಘನಿಕೇತನದಲ್ಲಿ ಶನಿವಾರ ನಡೆದ ದ.ಕ. ಜಿಲ್ಲಾ ಬಿಜೆಪಿಯ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಈಗ ಸಮಾಜವಾದ ಬಿಟ್ಟು ಮಜಾವಾದ ಅನುಸರಿಸುತ್ತಿದ್ದಾರೆ. ಜಾರ್ಜ್ ೆರ್ನಾಂಡಿಸ್ ಜತೆ ಇಂದಿರಾಗಾಂಧಿ ವಿರುದ್ಧ ಹೋರಾಟ ನಡೆಸಿದವರು ಈಗ ಇಂದಿರಾ ಮೊಮ್ಮಗ ರಾಹುಲ್ ಹೇಳಿದ ಹಾಗೆ ಕೇಳುತ್ತಿದ್ದಾರೆ ಎಂದರು.
ಬಿಜೆಪಿ ಸರ್ಕಾೃ ಇದ್ದಾಗ ಕೋವಿಡ್ ನಿರ್ವಹಣೆ ಸರಿಯಾಗಿ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಈಗ ರಾಜ್ಯದಲ್ಲಿ ಡೆಂೆ ಪ್ರಕರಣ ಗಣನೀಯವಾಗಿ ಏರಿಕೆಯಾಗಿದೆ. ರಾಜ್ಯ ಸರ್ಕಾರಕ್ಕೆ ಡೆಂೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ವಿಧಾನಸಭೆಯಲ್ಲಿ 135 ಸೀಟ್ ಗೆದ್ದು ನಾನು ನಡೆದದ್ದೇ ದಾರಿ ಎಂದು ಸಿದ್ದರಾಮಯ್ಯ ಸಾಗುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಮತದಾರ ಪಾಠ ಕಲಿಸಿದ್ದಾನ ಎಂದು ಅವರು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಲಿತಾಂಶ ಪಡೆದುಕೊಂಡಿದೆ. ಬೀದರ್, ಕಲಬುರ್ಗಿ, ಚಿಕ್ಕೋಡಿ ಸಹಿತ ಕೆಲವೆಡೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಉಂಟಾದ ಕಾರಣ ಹಿನ್ನಡೆಯಾಗಿದೆ. ಇಲ್ಲವಾದರೆ ಬಿಜೆಪಿ 24 ಸ್ಥಾನ ಗಳಿಸುತ್ತಿತ್ತು ಎಂದರು.
ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು. ನೂತನ ಸಂಸದ ಬ್ರಿಜೇಶ್ ಚೌಟ ಹಾಗೂ ಎಂಎಲ್‌ಸಿ ಡಾ. ಧನಂಜಯ ಸರ್ಜಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್‌ಕುಮಾರ್ ಬೊಟ್ಯಾಡಿ ಅಭಿನಂದನಾ
ಭಾಷಣ ಮಾಡಿದರು.
ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ,
ಮೇಯರ್ ಸುಧೀರ್ ಶೆಟ್ಟಿ, ಉಪಮೇಯರ್ ಸುನೀತಾ, ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು.
ಜಿಲ್ಲಾ ಉಪಾಧ್ಯಕ್ಷ ಸುನೀಲ್ ಆಳ್ವ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯತೀಶ್ ಆರ್ವಾರ್, ತಿಲಕ್‌ರಾಜ್ ಕೃಷ್ಣಾಪುರ ಕಾರ್ಯಕ್ರಮ ನಿರೂಪಿಸಿದರು.