ಮಕ್ಕಳಿಗೆ ನಿತ್ಯವೂ ಪೌಷ್ಟಿಕ ಆಹಾರ : ಜಿಲ್ಲಾ ಆರೋಗ್ಯಾಧಿಕಾರಿ ಡಾ.ಗಡಾದ್ ಸಲಹೆ; ಆರೋಗ್ಯ ತಪಾಸಣೆ

health chekup
ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಕ್ಕಳ ಆರೋಗ್ಯ ತಪಾಸಣೆ, ಅಪೌಷ್ಟಿಕತೆ ಕುರಿತು ಮಾಹಿತಿ ಕಾರ‌್ಯಕ್ರಮ ಹೊಸ ಬಡಾಕೆರೆ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡಾದ್, ಅಧಿಕಾರಿಗಳಾದ ಉಮೇಶ್ ಟಿ.ಎಲ್, ಶಶಿಧರ್ ಮೊದಲಾದವರಿದ್ದರು
Published on

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ

ದೈನಂದಿನ ಆಹಾರ ಪದ್ಧತಿ ಬಗ್ಗೆ ಜನರಿಗೆ ಗರಿಷ್ಠ ಅರಿವಿರಲಿ. ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ತರಕಾರಿ, ಹಣ್ಣುಗಳನ್ನು ಪಾಲಕರು ನೀಡಬೇಕು. ಇದಕ್ಕಾಗಿ ಇಲಾಖೆಯಲ್ಲಿ ಲಭ್ಯವಿರುವ ಸವಲತ್ತುಗಳನ್ನು ಬಳಸಿಕೊಳ್ಳಿ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡಾದ್ ಹೇಳಿದರು.

ಕುಂದಾಪುರ ತಾಲೂಕಿನ ಹೊಸ ಬಡಾಕೆರೆ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಕುಂದಾಪುರ ಆರೋಗ್ಯ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರ, ಕೋಟೇಶ್ವರ ಗ್ರಾಮ ಪಂಚಾಯಿತಿ, ರೋಟರಿ ಕ್ಲಬ್, ಕುಂದಾಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಆರು ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ, ಅಪೌಷ್ಟಿಕತೆ ಕುರಿತ ಮಾಹಿತಿ ಕಾರ‌್ಯಕ್ರಮ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಟಿ.ಎಲ್, ಉಪಾಧ್ಯಕ್ಷೆ ಆಶಾ ವಿ., ಉಡುಪಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್, ರೋಟರಿ ಕ್ಲಬ್ ಅಧ್ಯಕ್ಷ ಸತೀಶ್ ಎಂ. ನಾಯಕ ಮಾತನಾಡಿದರು. ಕೋಟೇಶ್ವರ ಗ್ರಾಪಂ ಅಧ್ಯಕ್ಷೆ ರಾಗಿಣಿ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಪೂರ್ಣಿಮಾ ಆರ್.ಶೇಟ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಜೋತ್ಸ್ನಾ, ಪಿಡಿಒ ರಾಜೇಶ್ ನಾಯಕ್, ಅಂಗನವಾಡಿ ಕಾರ್ಯಕರ್ತೆ ಶೋಭಾ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ವೃಂದಾ ಬಿ.ತಾಮಸೆ ಸ್ವಾಗತಿಸಿದರು. ಡಾ.ಮಂಜುನಾಥ್ ಟಿ.ಎ. ಪ್ರಸ್ತಾವನೆಗೈದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮೀ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net