ಮಂಡೆಕೋಲಲ್ಲಿ ಹೈನುಗಾರಿಕೆ ಮಾಹಿತಿ

Published on

ಸುಳ್ಯ: ತಾಲೂಕಿನ ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಹೈನುಗಾರಿಕೆ ಮಾಹಿತಿ ಶಿಬಿರ ಸಂಘದ ಧವಳಧಾರೆ ಸಭಾಂಗಣದಲ್ಲಿ ನಡೆಯಿತು. ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ರೈತ ಉತ್ಪಾದಕ ಕಂಪನಿಯ ನಿರ್ದೇಶಕಿ ಮಧುರ ಎಂ.ಆರ್. ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ವೆಂಕಪ್ಪ ನಾಯ್ಕ ಕೆ.ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ದ.ಕ.ಹಾಲು ಒಕ್ಕೂಟ ಮಂಗಳೂರು ಇದರ ಸಹಾಯಕ ವ್ಯವಸ್ಥಾಪಕ ಡಾ.ಅನುದೀಪ್ ಹಾಗೂ ದ.ಕ.ಹಾಲು ಒಕ್ಕೂಟ ಮಂಗಳೂರು ಇದರ ಸುಳ್ಯ ವಿಸ್ತರಣಾಧಿಕಾರಿ ಹರೀಶ್ ಕುಮಾರ್ ಎಂ.ಎಸ್.ಭಾಗವಹಿಸಿದ್ದರು. ಸಹಕಾರ ಸಂಘದ ಕಾರ್ಯದರ್ಶಿ ಪುಷ್ಪಾವತಿ, ಆಡಳಿತ ಮಂಡಳಿ ನಿರ್ದೇಶಕರು, ಸದಸ್ಯರು, ಸಿಬ್ಬಂದಿ ಹಾಗೂ ಕೃಷಿಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net