ದಕ್ಷಿಣ ಕನ್ನಡ 16.4 ಕೆಜಿ ಡ್ರಗ್ಸ್ ವಶ

liqour
Published on

ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.23ರವರೆಗೆ ಜಿಲ್ಲೆಯಲ್ಲಿ 5,66,82,798 ರೂಪಾಯಿ ಮೌಲ್ಯದ 1,42,751 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 8,89,950 ರೂ. ಮೌಲ್ಯದ 16.4 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.


ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 1,264 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net