ದ.ಕ ಜಿಲ್ಲೆಯಲ್ಲಿ 26ರಿಂದ ದಸರಾ ರಜೆ

IMG-20220912-WA0007
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಸರಾ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ.26ರಿಂದ ಅ.10ರ ವರೆಗೆ ನೀಡುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರಿಗೆ ಸೂಚನೆ ನೀಡಿದ್ದಾರೆ.
ಈಗಾಗಲೇ ಪ್ರಕಟಿಸಲಾಗಿರುವ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ರಜೆಯ ಕುರಿತ ವಿವರಗಳನ್ನು ನೀಡಲಾಗಿದೆ. ಕೆಲವು ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿಗದಿ ಪಡಿಸಲಾದ ವೇಳಾಪಟ್ಟಿಯಲ್ಲಿ ಮಾರ್ಪಾಡು ಅಗತ್ಯವಿದ್ದಲ್ಲಿ ಮಾಡುವಂತೆ ಆಯಾ ಜಿಲ್ಲಾಧಿಕಾರಿ/ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಅನುಮತಿ ನೀಡಲಾಗಿದೆ. ದ.ಕ ಜಿಲ್ಲೆಯಲ್ಲಿ ದಸರಕ್ಕೆ ಪೂರಕವಾಗಿ ರಜೆ ನೀಡುವಂತೆ ಕೋರಿಕೆ ಬಂದ ಹಿನ್ನೆಲೆಯಲ್ಲಿ ಅದನ್ನು ಪರಿಶೀಲಿಸಿ ಮಾರ್ಪಾಡು ಮಾಡಲು ಅವಕಾಶ ನೀಡಲಾಗಿದೆ. ಅ.2ರಂದು ಗಾಂಧಿ ಜಯಂತಿ ಆಚರಣೆ ಮಾಡುವ ಷರತ್ತಿನೊಂದಿಗೆ ರಜೆ ನೀಡುವಂತೆ ಸಚಿವ ಬಿ.ಸಿ.ನಾಗೇಶ್ ಪ್ರಕಟಣೆ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net