ಪಠ್ಯದ ಜತೆಗೆ ಜೀವನ ಮೌಲ್ಯ ರೂಢಿ: ವೃತ್ತ ನಿರೀಕ್ಷಕ ರವಿ ಬಿ.ಎಸ್. ಸಲಹೆ

chess
ಚೆಸ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ಮಾತನಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಮತ್ತಿತರರಿದ್ದರು.
Published on

ಕಡಬ: ವಿದ್ಯಾರ್ಥಿಗಳ ಬದುಕಿನಲ್ಲಿ ಪಠ್ಯ ವಿಷಯವೇ ಮುಖ್ಯವಲ್ಲ. ಪಠ್ಯದ ಜತೆಗೆ ಜೀವನ ಮೌಲ್ಯ, ಸಂಸ್ಕಾರಗಳು ರೂಢಿಯಾಗಬೇಕು ಎಂದು ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ಹೇಳಿದರು.

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ, ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಬಾಲಕ ಮತ್ತು ಬಾಲಕಿಯರ ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿಪೂರ್ವ ವಿಭಾಗದ ಚೆಸ್ ಪಂದ್ಯಾಟ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಇಂದುಶೇಖರ ಶೆಟ್ಟಿ ಬರೆಪುದೇಲು ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಉಪಸ್ಥಿತರಿದ್ದರು. ಕನ್ನಡ ಮಾಧ್ಯಮ ವಿಭಾಗ ಮುಖ್ಯಶಿಕ್ಷಕಿ ಆಶಾ ಎಸ್.ರೈ ಪ್ರಾಸ್ತಾವಿಸಿ ಸ್ವಾಗತಿಸಿದರು. ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕ ಸತೀಶ್ ಕುಮಾರ್ ಜಿ.ಆರ್ ವಂದಿಸಿದರು. ಶಿಕ್ಷಕ ಚಂದ್ರಹಾಸ ಕೆ.ಸಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net