

ಮಂಗಳೂರು: ದ.ಕ ಜಿಲ್ಲಾ ಮಟ್ಟದ 76ನೇ ಸ್ವಾತಂತ್ರ್ಯ ದಿನಾಚರಣೆ ಸೋಮವಾರ ನಗರದ ನೆಹರು ಮೈದಾನದಲ್ಲಿ ಸಂಭ್ರಮದಿಂದ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.