

ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ.
ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ.ಕುಮಾರ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.
1986 ರಲ್ಲಿ ಜನಿಸಿದ ಅವರು 2013 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ.