

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಜೂ.28ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ.
ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.ಆದೇಶ ಹೊರಡಿಸಿದ್ದಾರೆ.