

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ. ಆನಂದ್ ಕುಮಾರ್ ಅವರು ವರ್ಗಾವಣೆಯಾಗಿದ್ದು, ನಗರದ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಬೀಳ್ಕೊಡುಗೆ ಸಮಾರಂಭ ಜರುಗಿತು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಹಾಗೂ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಾವಣೆಯಾದ ಆನಂದ್ ಕುಮಾರ್ ಅವರನ್ನು ಸನ್ಮಾನಿಸಿ, ಗೌರವಿಸಿದರು.
ತುಮಕೂರಿನಲ್ಲಿ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಾದ ವಿಶೇಷ ಭೂ ಸ್ವಾಧನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಘು ಎ.ಇ. ಅವರು ದಕ್ಷಿಣ ಕನ್ನಡ ಜಿಪಂ ಉಪ ಕಾರ್ಯದರ್ಶಿಯಾಗಿ ಇಂದು ಅಧಿಕಾರ ಸ್ವೀಕರಿಸಿದರು.