ಬೆಳ್ತಂಗಡಿ ತಾಲೂಕುಮಟ್ಟದ ಭಗವದ್ಗೀತಾ ಸ್ಪರ್ಧೆ

 ಬೆಳ್ತಂಗಡಿ ತಾಲೂಕುಮಟ್ಟದ ಭಗವದ್ಗೀತಾ ಸ್ಪರ್ಧೆಯನ್ನು ಅದ್ವಿತೀ ರಾವ್ ಕಾರ್ಯಕ್ರಮ ಉದ್ಘಾಟಿಸಿದರು.
ಬೆಳ್ತಂಗಡಿ ತಾಲೂಕುಮಟ್ಟದ ಭಗವದ್ಗೀತಾ ಸ್ಪರ್ಧೆಯನ್ನು ಅದ್ವಿತೀ ರಾವ್ ಕಾರ್ಯಕ್ರಮ ಉದ್ಘಾಟಿಸಿದರು.
Published on
ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ, ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ, ಉಜಿರೆ ಎಸ್‌ಡಿಎಂ ಕಾಲೇಜಿನ ಸಂಸ್ಕೃತ ವಿಭಾಗದ ಸಹಯೋಗದಲ್ಲಿ ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಅಭಿಯಾನ 2025ರ ಅಂಗವಾಗಿ ಬೆಳ್ತಂಗಡಿ ತಾಲೂಕುಮಟ್ಟದ ಭಗವದ್ಗೀತಾ ಸ್ಪರ್ಧೆ ಎಸ್‌ಡಿಎಂ ಕಾಲೇಜಿನಲ್ಲಿ ನಡೆಯಿತು.

ಫಲಿತಾಂಶ

ರಸಪ್ರಶ್ನೆ ಸ್ಪರ್ಧೆ: ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನೇತ್ರಾವತಿ, ಚಿನ್ಮಯ್ ಪ್ರಥಮ, ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ(ಸಿಬಿಎಸ್‌ಸಿ) ಶಾಲೆಯ ಅನಿರುದ್ಧ ಎ., ನಿನಾದ ಅನಂತ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಭಾಷಣ ಸ್ಪರ್ಧ: ಪ್ರಾಥಮಿಕ ವಿಭಾಗ ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಆರಾಧ್ಯ ಪಿ.ಜೋಷಿ ಪ್ರಥಮ, ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ(ಸಿಬಿಎಸ್‌ಸಿ) ಶಾಲೆಯ ಗಾನಪ್ರಿಯ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರೌಢಶಾಲಾ ವಿಭಾಗ ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಪೂರ್ವಿ ಭಟ್ ಪ್ರಥಮ, ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ(ಸಿಬಿಎಸ್‌ಸಿ) ಶಾಲೆ ಸಿದ್ಧಾಂತ ಸಪ್ರೇ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪದವಿ ಪೂರ್ವ ವಿಭಾಗ ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಹಂಸಿನಿ ಭಿಡೆ ಪ್ರಥಮ, ನಿಜ ಕುಲಾಲ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಭಗವದ್ಗೀತೆ ಕಂಠಪಾಠ ಸ್ಪರ್ಧೆ

ಪ್ರಾಥಮಿಕ ವಿಭಾಗ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ(ರಾಜ್ಯ ಪಠ್ಯಕ್ರಮ) ಶಾಲೆಯ ಅದ್ವಿತಿ ರಾವ್ ಪ್ರಥಮ, ಬಂಡಿಹೊಳೆ ಸರ್ಕಾರಿ ಶಾಲೆ ಪ್ರಣತಿ ತುಳುಪುಳೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರೌಢಶಾಲಾ ವಿಭಾಗ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ತ್ರಿವೇಣಿ ಪ್ರಥಮ, ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ(ಸಿಬಿಎಸ್‌ಸಿ) ಶಾಲೆಯ ಸಾನ್ವಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net