ಸುಳ್ಯ ಪಿಯು ಕಾಲೇಜು ಕಟ್ಟಡ ಲೋಕಾರ್ಪಣೆ

ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಒಸಾಟ್ ವತಿಯಿಂದ ನಿರ್ಮಿಸಿದ ನೂತನ ಕಟ್ಟಡವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.
ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಒಸಾಟ್ ವತಿಯಿಂದ ನಿರ್ಮಿಸಿದ ನೂತನ ಕಟ್ಟಡವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.
Published on

ಸುಳ್ಯ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಾಲ್ಕು ತರಗತಿ ಕೊಠಡಿಗಳ ನೂತನ ಕಟ್ಟಡವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.

ದಾನಿಗಳ ಸಹಕಾರದಿಂದ ಒಸಾಟ್ ಸಂಸ್ಥೆ ಒಂದು ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಿ ಕೊಡುಗೆಯಾಗಿ ನೀಡಿದ್ದಾರೆ. ದಾನಿಗಳಾದ ಗುರು ಪಾಂಗಾಳ, ಸಂಧ್ಯಾ ಹಾಗೂ ನಿರ್ಮಲಾ ಜಯ್ ನೂತನ ತರಗತಿ ಕೊಠಡಿಗಳನ್ನು ಉದ್ಘಾಟಿಸಿದರು.

ಓಸಾಟ್ ಸಂಸ್ಥೆ ವತಿಯಿಂದ ನಿರ್ಮಿಸಲಾದ ಶೌಚಗೃಹ ಉದ್ಘಾಟಿಸಲಾಯಿತು. ಸುಳ್ಯ ತಹಸೀಲ್ದಾರ್ ಮಂಜುಳಾ ಎಂ., ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಮತ್ತಿತರರಿದ್ದರು.

ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಎಸ್‌ಡಿಎಂಸಿ ಅಧ್ಯಕ್ಷೆ ಮಂಜುಳಾ ಬಡಿಗೇರ್ ವಹಿಸಿದ್ದರು. ಕಟ್ಟಡ ದಾನಿಗಳಾದ ಗುರು ಪಾಂಗಾಳ, ಸಂಧ್ಯಾ, ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಒಸಾಟ್ ಸಂಸ್ಥೆ ಪ್ರತಿನಿಧಿ ಬಾಲಕೃಷ್ಣ, ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಅಮೃತ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಬಿ.ಸದಾಶಿವ, ನಗರ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ ನೀರಬಿದ್ರೆ ಶುಭ ಹಾರೈಸಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಸುಡಾ ಅಧ್ಯಕ್ಷ ಕೆ.ಎಂ.ಮುಸ್ತಫ ಜನತಾ, ನ.ಪಂ. ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ, ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್ ಅರಂಬೂರು ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net