ವಿಜಯವಾಣಿ ಸುದ್ದಿಜಾಲ ಉಪ್ಪಿನಂಗಡಿ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಜಿಲ್ಲಾಮಟ್ಟದ ಸಭೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ನಡೆಯಿತು.
ಧನ್ಯ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಭಜನಾ ಪರಿಷತ್ ಸಂಚಾಲಕ ಜಿ.ಸುಬ್ರಹ್ಮಣ್ಯ ಪ್ರಸಾದ್, ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಅಲ್ಲಲ್ಲಿ ಭಜನೋತ್ಸವದ ಮುಖಾಂತರ ಭಜಕರನ್ನ ಸಂಘಟಿಸುತ್ತಿರುವುದು ಭಜನಾ ಪರಿಷತ್ತಿನ ಶ್ಲಾಘನೀಯ ಕೆಲಸ ಎಂದರು.
ನವೆಂಬರ್ 28, 30ರಂದು ನಡೆಯಲಿರುವ ಗೀತೋತ್ಸವ, ಭಜನೋತ್ಸವದ ಬಗ್ಗೆ ಉಡುಪಿ ಶ್ರೀ ಕೃಷ್ಣ ಮಠದ ಪ್ರಧಾನರಾದ ವಿಕ್ರಂ ಕುಂಟಾರು ಸಮಗ್ರ ಮಾಹಿತಿ ನೀಡಿದರು. ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರನ್ನಾಗಿ ರವಿ ಚಾರ್ಮಾಡಿ, ಕಡಬ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಗಳಾಗಿ ದಿವೀಶ್, ಪ್ರತಿ ತಾಲೂಕು ಭಜನಾ ಪರಿಷತ್ತಿಗೆ ಅಲ್ಲಿನ ಗಣ್ಯರನ್ನು ಗೌರವ ಸಲಹೆಗಾರರನ್ನಾಗಿ ಆಯ್ಕೆ ಮಾಡಲಾಯಿತು.
ಭಜನಾ ಕಮ್ಮಟದ ತರಬೇತುದಾರ ರಾಮಕೃಷ್ಣ ಕಾಟುಕುಕ್ಕೆ, ವಿದುಷಿ ಉಷಾ ಹೆಬ್ಬಾರ್, ಪುತ್ತೂರು ತಾಲೂಕು ಯೋಜನಾಧಿಕಾರಿ ಶಶಿಧರ್, ಕಡಬ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಾರ್ಯದರ್ಶಿ ಸತ್ಯನಾರಾಯಣ ಹೆಗ್ಡೆ, ಮಂಗಳೂರು, ಮೂಡುಬಿದಿರೆ, ಬಂಟ್ವಾಳ, ಕಾಸರಗೋಡು, ಮಂಜೇಶ್ವರ, ವಿಟ್ಲ, ಪುತ್ತೂರು, ಕಡಬ, ಸುಳ್ಯ, ಗುರುವಾಯನಕೆರೆ, ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರು, ಪದಾಧಿಕಾರಿಗಳು, ಗೌರವ ಸಲಹೆಗಾರರು, ಭಜಕ ಸದಸ್ಯರು, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಪುತ್ತೂರು ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಲೋಕೇಶ್ ಬೆತ್ತೋಡಿ ಸ್ವಾಗತಿಸಿದರು. ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ.ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.