ಬೆಳ್ತಂಗಡಿಯ ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ.(37) ಮತ್ತು ಗೂಡ್ಸ್ ವಾಹನ ಚಾಲಕ ಅಬ್ದುಲ್ ಸಾದಿಕ್(37) ಬಂಧಿತರು. ಗಾಂಜಾ ಸಾಗಾಟದ ಖಚಿತ ಮಾಹಿತಿ ಪಡೆದ ಸಂಪ್ಯ ಠಾಣೆ ಎಸ್‌ಐ ಗುಣಪಾಲ ಜೆ. ಹಾಗೂ ಸಿಬ್ಬಂದಿ ಕಾರ್ಯೋನ್ಮುಖ ರಾಗಿದ್ದು, ಪಡುವನ್ನೂರು ಗ್ರಾಮದ ಸಜಂಕಾಡಿಯ ಈಶ್ವರಮಂಗಲ- ಸುಳ್ಯಪದವು ರಸ್ತೆಯಲ್ಲಿ ಗಾಂಜಾ ಸಾಗಿಸುತ್ತಿದ್ದ ಮಿನಿ ಲಾರಿ ಹಾಗೂ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ. 110 ಕೆ.ಜಿ.ಗೂ ಅಧಿಕ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಸಿಬ್ಬಂದಿ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ, ನಾಗರಾಜ್, ಸತೀಶ್, ರಮೇಶ್, ಸುಬ್ರಮಣಿ, ವಿನೋದ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.