ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಸಾರಥ್ಯದಲ್ಲಿ ನಡೆದ 3ನೇ ವರ್ಷದ ‘ಸುಳ್ಯೋತ್ಸವ’ ಸಂಪನ್ನಗೊಂಡಿತು.
ಎರಡು ದಿನಗಳ ಕಾಲ ನಡೆದ ಸಾಂಸ್ಕೃತಿಕ ವೈಭವ ಮೋಡಿ ಮಾಡಿತು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದ ಉತ್ಸವದಲ್ಲಿ ಖ್ಯಾತ ಕಲಾ ತಂಡಗಳಿಂದ ಸಾಂಸ್ಕೃತಿಕ ವೈಭವ ಮನಸೂರೆಗೊಂಡಿತು. ಎರಡನೇ ದಿನ ಸಾಂಸ್ಕೃತಿಕ ಸಂಭ್ರಮದಲ್ಲಿ ಕನ್ನಡ ಚಲನಚಿತ್ರದ ಸಂಗೀತ ನಿರ್ದೇಶಕ ಹಾಗೂ ಗಾಯಕ ನವೀನ್ ಸಜ್ಜು ನೇತೃತ್ವದಲ್ಲಿ 3 ಗಂಟೆ ಸಾಂಸ್ಕೃತಿಕ ಸಂಭ್ರಮ ನಡೆಯಿತು.
ಎರಡನೇ ದಿನದ ಸಾಂಸ್ಕೃತಿಕ ವೇದಿಕೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಧರ್ಮದರ್ಶಿ ಹರೀಶ್, ಪುತ್ತೂರು ಮುಳಿಯ ಕೇಶವ ಭಟ್ ಸನ್ಸ್ ಚಿನ್ನಾಭರಣ ಮಳಿಗೆಯ ಎಂಡಿ ಕೇಶವಪ್ರಸಾದ್ ಮುಳಿಯ, ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.
ಸುಳ್ಯೋತ್ಸವದ ರೂವಾರಿ, ಅಕಾಡೆಮಿ ಆ್ ಲಿಬರಲ್ ಎಜುಕೇಷನ್‌ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ., ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾರ್ಯದರ್ಶಿ ಐಶ್ಚರ್ಯ ಕೆ.ಸಿ., ಕೋಶಾಧಿಕಾರಿ ಗೌತಮ್ ಗೌಡ, ಸುಳ್ಯೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಆರ್‌ಜೆ ತ್ರಿಶೂಲ್ ಕಾರ್ಯಕ್ರಮ ನಿರೂಪಿಸಿದರು.