ಪ್ರಕರಣಕ್ಕೆ ಸಂಬಂಧಿಸಿ 3ನೇ ಜೆಎಂಎ್ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಯನ್ನು ಬಿಡುಗಡೆಗೊಳಿಸಲಾಗಿತ್ತು. ಸದ್ರಿ ಆದೇಶದ ವಿರುದ್ಧ ಅಭಿಯೋಜನೆ ಮೇಲ್ಮನವಿ ಸಲ್ಲಿಸಿದ್ದು, ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎ್ಟಿಎಸ್‌ಸಿ-1 ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿತ್ತು. ನ್ಯಾಯಾಲಯವು ಅಭಿಯೋಜನೆಯ ಹಾಗೂ ಆರೋಪಿ ಪರ ವಾದ ಪ್ರತಿ ವಾದವನ್ನು ಆಲಿಸಿ ಈತನ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ವಿಚಾರಣೆ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿದೆ. ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎ್ಟಿಎಸ್‌ಸಿ1 ತ್ವರಿತ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ಮೋಹನ್ ಜೆ.ಎಸ್. ಅಪರಾಧಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ.