ಬಂಟ್ವಾಳ ತಾಲೂಕಿನ ಪೆರ್ನೆಯ ಯುವತಿ ನಾಪತ್ತೆ

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿ
 ಕವಿತಾ
ಕವಿತಾ
Published on: 

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ನೆಕ್ಕರೆ ಮನೆ ನಿವಾಸಿ ಕವಿತಾ(21) ನ.20ರಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ಬಿ.ಸಿ. ರೋಡಿನ ಬ್ಯಾಂಕೊಂದರಲ್ಲಿ ಅಟೆಂಡರ್ ಆಗಿ ಕಾರ್ಯನಿರ್ವಹಿಸುತ್ತಿರುವ ಈಕೆ ಶುಕ್ರವಾರ ಮನೆ ಸಮೀಪದ ಅಜ್ಜಿಯ ಮನೆಗೆಂದು ಹೋದವರು ನಾಪತ್ತೆಯಾಗಿದ್ದಾರೆ ಎಂದು ಆಕೆಯ ತಂದೆ ದಿನೇಶ್ ನಾಯ್ಕ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.