ಧೈರ್ಯ, ಸ್ವಾಭಿಮಾನ ಯುವಜನತೆಗೆ ದಾರಿದೀಪ : ಅನಿತಾ ಸುರೇಂದ್ರ ಕುಮಾರ್

ಅಬ್ಬಕ್ಕ @500 ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಕಾರ್ಯದರ್ಶಿ ರಶ್ಮಿತಾ ಜೈನ್ ಅವರಿಗೆ ರಾಣಿ ಅಬ್ಬಕ್ಕ ಪುರಸ್ಕಾರ ಪ್ರದಾನ ಮಾಡಲಾಯಿತು.
ಅಬ್ಬಕ್ಕ @500 ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಕಾರ್ಯದರ್ಶಿ ರಶ್ಮಿತಾ ಜೈನ್ ಅವರಿಗೆ ರಾಣಿ ಅಬ್ಬಕ್ಕ ಪುರಸ್ಕಾರ ಪ್ರದಾನ ಮಾಡಲಾಯಿತು.
Published on
ಮೂಡುಬಿದಿರೆ: ರಾಣಿ ಅಬ್ಬಕ್ಕರ ಶೌರ್ಯ, ಧೈರ್ಯ ಮತ್ತು ಸ್ವಾಭಿಮಾನ ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಲಿ. ಇತಿಹಾಸದ ಇಂತಹ ವೀರಗಾಥೆಗಳಿಂದ ಸ್ಫೂರ್ತಿ ಪಡೆದು ವಿದ್ಯಾರ್ಥಿಗಳು ದೇಶಪ್ರೇಮದೊಂದಿಗೆ ಸಾರ್ಥಕ ಬದುಕು ರೂಪಿಸಿಕೊಳ್ಳಬೇಕು ಎಂದು ಅಬ್ಬಕ್ಕ ವಂಶಸ್ಥೆ, ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ಹೇಳಿದರು.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಹಾಗೂ ಎಕ್ಸಲೆಂಟ್ ವಿದ್ಯಾಸಂಸ್ಥೆ ಆಶ್ರಯದಲ್ಲಿ ನಡೆದ ಅಬ್ಬಕ್ಕ @500 ಪ್ರೇರಣಾದಾಯಿ ಉಪನ್ಯಾಸಗಳ ಸರಣಿ 99ನೇ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಣಿ ಅಬ್ಬಕ್ಕ ಇತಿಹಾಸದ ಕುರಿತು ವಿಶೇಷ ಸೇವೆ ಸಲ್ಲಿಸಿದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ಎಂ.ತುಕಾರಾಂ ಪೂಜಾರಿ, ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್, ಮಂಗಳೂರು ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ್ ರೈ ಕುಕ್ಕುವಳ್ಳಿ, ಜವನೆರ್ ಬೆದ್ರ ಸ್ಥಾಪಕ ಅಮರಕೋಟೆ ಹಾಗೂ ಸಂಶೋಧಕ ಡಾ.ಯು.ಕೆ ಸಸಿಹಿತ್ಲು ಅವರನ್ನು ಗೌರವಿಸಲಾಯಿತು.
ಸಂಘದ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ.ಮಾಧವ ಎಂ.ಕೆ. ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸಂಘದ ಮಮತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉಪಮುಖ್ಯಶಿಕ್ಷಕಿ ಜಯಶೀಲಾ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net