ಪರಾರಿಯಾಗಿದ್ದ ಆರೋಪಿಗಳು ಸೆರೆ

ಅಕ್ರಮ ಜಾನುವಾರು ಸಾಗಾಟ ಪ್ರಕರಣ
Published on: 

ಪುತ್ತೂರು ಗ್ರಾಮಾಂತರ: ಪಿಕಪ್ ವಾಹನದಲ್ಲಿ ಕೇರಳದ ಕಡೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಿದ ಪ್ರಕರಣದಲ್ಲಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಸರೋಳಿ ನಿವಾಸಿ ಹಸ್ಪರ್ ಯಾನೆ ಅಮ್ಮಿ ಮತ್ತು ಕೆದಿಲ ಗ್ರಾಮದ ಸತ್ತಿಕಲ್ಲು ನಿವಾಸಿ ಇಬ್ರಾಹಿಂ ಬಂಧಿತರು.

ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಅ.5ರಂದು ನಸುಕಿನ ವೇಳೆ ಪುತ್ತೂರು ಗ್ರಾಮಾಂತರ ಠಾಣೆ ಉಪನಿರೀಕ್ಷಕಿ ಸುಷ್ಮಾ ಜಿ.ಭಂಡಾರಿ ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಪಿಕಪನ್ನು ರಸ್ತೆ ಬದಿ ನಿಲ್ಲಿಸಿ ಚಾಲಕ ಹಾಗೂ ವಾಹನದಲ್ಲಿದ್ದ ಮತ್ತೊಬ್ಬ ಪರಾರಿಯಾಗಿದ್ದರು. 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಸಂಪ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ, ಪರವಾನಗಿ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ್ದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್ ಎಂಬಾತನನ್ನು ಬಂಧಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net