ರಸ್ತೆಯುದ್ದಕ್ಕೂ ಆಯಿಲ್ ಸೋರಿಕೆ ಆಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಅಬ್ಬಕ್ಕ ವೃತ್ತದಿಂದ ಉಳ್ಳಾಲಬೈಲ್‌ವರೆಗೆ ಏಕಮುಖ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಸ್ಥಳೀಯರು ಮರದ ಮಿಲ್‌ಗಳ ಗರಗಸದ ಹುಡಿ ರಸ್ತೆಗೆ ಚೆಲ್ಲಿ ಮುಂದಕ್ಕೆ ಅನಾಹುತ ಆಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡಿದ್ದರು. ಇಂತಹ ಘಟನೆ ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಪ್ರಕರಣಕ್ಕೆ ಸಂಬಂಧಿಸಿದ ಕಂಟೈನರ್, ಫಿಶ್‌ಮೀಲ್ ಕಾರ್ಖಾನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯು.ಟಿ.ಖಾದರ್ ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಅಪಘಾತದಿಂದ ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚ ಕಂಟೈನರ್‌ಗೆ ಸಂಬಂಧಿಸಿದ ಕಾರ್ಖಾನೆ ಮಾಲೀಕರು ಭರಿಸಬೇಕೆಂದು ಆದೇಶಿಸಿದ್ದಾರೆ.