

ಮೂಡುಬಿದಿರೆ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಜಯಂತ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಉಪ್ಪಿನಂಗಡಿಯ ಬಾರ್‌ನಲ್ಲಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕೊಡಂಗಲ್ಲಿನ ಅನಿಲ್ ಲೋಬೋ ನೀಡಿದ ದೂರಿನ ಮೇರೆಗೆ ಜಯಂತ, ಸುರೇಶ, ಅಶೋಕ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಜಯಂತ ತಲೆಮರೆಸಿಕೊಂಡಿದ್ದ.