ಎರಡು ಕೊಲೆ, ನಾಲ್ಕು ಕೊಲೆಯತ್ನ, ಗ್ಯಾಂಗ್‌ರೇಪ್, ಹದಿನೇಳು ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಹಲ್ಲೆ, ಜೈಲಿನಲ್ಲಿ ಸಹ ಕೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ, ದರೋಡೆಗೆ ಸಂಚು ಇತ್ಯಾದಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 31 ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.