ಕೋಟಿ ಚೆನ್ನಯ ಕ್ರೀಡಾಕೂಟದಲ್ಲಿ ಸಾಧಕರಿಗೆ ಸನ್ಮಾನ

 ಕೋಟಿ- ಚೆನ್ನಯ ಕ್ರೀಡಾಕೂಟದಲ್ಲಿ ಮಂಗಳೂರು ವಿಭಾಗದ ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹಾಗೂ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪಡೆದ ಸತೀಶ್ ಕಾಶಿಪಟ್ನ ಅವರನ್ನು ಅಭಿನಂದಿಸಲಾಯಿತು.
ಕೋಟಿ- ಚೆನ್ನಯ ಕ್ರೀಡಾಕೂಟದಲ್ಲಿ ಮಂಗಳೂರು ವಿಭಾಗದ ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹಾಗೂ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪಡೆದ ಸತೀಶ್ ಕಾಶಿಪಟ್ನ ಅವರನ್ನು ಅಭಿನಂದಿಸಲಾಯಿತು.
Published on

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನದ ದಿ.ಕೆ.ವಸಂತ ಬಂಗೇರ ಸಭಾ ವೇದಿಕೆಯಲ್ಲಿ ನಡೆದ ಕೋಟಿ- ಚೆನ್ನಯ ಕ್ರೀಡಾಕೂಟದಲ್ಲಿ ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ.ಕಾಶಿಪಟ್ಣ ಮತ್ತು ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಸಾಧನೆಗೈದ ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು, ನಿಕಟಪೂರ್ವ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಉದ್ಯಮಿ ಅಭಿನಂದನ್ ಹರೀಶ್ ಕುಮಾರ್, ಗುತ್ತಿಗೆದಾರ ಪ್ರಶಾಂತ್ ಪಾರೆಂಕಿ, ಅಪರ ಸರ್ಕಾರಿ ವಕೀಲ ಮನೋಹರ ಇಳಂತಿಲ, ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್, ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್, ಸಂಘದ ಮಾಜಿ ನಿರ್ದೇಶಕ ಜಾರಪ್ಪ ಪೂಜಾರಿ ಬೆಳಾಲು, ಗುಂಡೂರಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿ ಮಜಲು, ಸಂಘದ ನಿರ್ದೇಶಕ ಸಂಜೀವ ಪೂಜಾರಿ ಕೊಡಂಗೆ ಮೊದಲಾದವರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್.ಕುಕ್ಕೇಡಿ ಸ್ವಾಗತಿಸಿದರು. ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ವಧು- ವರರ ಅನ್ವೇಷಣೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net