ರೈಲು ಸಂಖ್ಯೆ 09014, 09020, 09036, 09113, 09109, 09123, 09021 ಮತ್ತು 09029 ಇವುಗಳ ಟಿಕೆಟ್ ಕಾಯ್ದಿರಿಸುವಿಕೆ ಪ್ರಕ್ರಿಯೆಯು ಆ. 15ರಿಂದ ಪ್ರಯಾಣಿಕರ ಕಾಯ್ದಿರಿಸುವಿಕೆ ಕೇಂದ್ರಗಳಲ್ಲಿ, ಇಂಟರ್‌ನೆಟ್ ಹಾಗೂ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ರೈಲುಗಳ ವಿವರವಾದ ನಿಲುಗಡೆಗಳು ಮತ್ತು ಸಮಯಗಳ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ರೈಲ್ವೇ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.