ಅಗ್ನಿವೀರ ನೇಮಕಾತಿ ರ‌್ಯಾಲಿ ಯಶಸ್ವಿ

ಅಗ್ನಿವೀರ್ ನೇಮಕಾತಿ ರ‌್ಯಾಲಿಯು ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಯಶಸ್ವಿಯಾಗಿ ನಡೆಯಿತು.
ಅಗ್ನಿವೀರ್ ನೇಮಕಾತಿ ರ‌್ಯಾಲಿಯು ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಯಶಸ್ವಿಯಾಗಿ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • 11 ಜಿಲ್ಲೆಗಳ 8,500 ಮಂದಿ ಭಾಗಿ
  • ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಹಕಾರ
  • ಶಿಸ್ತು, ಸಂಘಟನೆಗೆ ಮಾದರಿ
ಭಾರತೀಯ ಸೇನೆಯ ಅಗ್ನಿಪಥ ಯೋಜನೆ ಅಡಿಯಲ್ಲಿ ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ನಡೆದ ಈ ರ‌್ಯಾಲಿ ರಾಜ್ಯಮಟ್ಟದಲ್ಲಿ ಮಾದರಿ ಕಾರ್ಯಕ್ರಮವಾಗಿ ಗುರುತಿಸಿಕೊಂಡಿದೆ. ಜ.28ರಿಂದ ಫೆ.8ರವರೆಗೆ ನಡೆದ ಈ ಪ್ರಕ್ರಿಯೆಯಲ್ಲಿ 11 ಜಿಲ್ಲೆಗಳಿಂದ 8,500ಕ್ಕೂ ಹೆಚ್ಚು ಯುವಕರು ಭಾಗವಹಿಸಿದ್ದರು. ವಿಜಯಪುರ, ಬಾಗಲಕೋಟೆ, ಧಾರವಾಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದು ರ‌್ಯಾಲಿಗೆ ಹಾಜರಾಗಿದ್ದರು. ಆಯ್ಕೆ ಪ್ರಕ್ರಿಯೆ ಲಿಖಿತ, ದೈಹಿಕ ಮತ್ತು ವೈದ್ಯಕೀಯ ಎಂಬ ಮೂರು ಹಂತಗಳಲ್ಲಿ ನಡೆದಿದ್ದು, ಪ್ರತಿ ಹಂತದಲ್ಲೂ ಕಟ್ಟುನಿಟ್ಟಿನ ಮಾನದಂಡ ಅನುಸರಿಸಲಾಯಿತು.
ಮಾದರಿಯಾದ ಆಳ್ವಾಸ್ ವ್ಯವಸ್ಥೆ

ಅಗ್ನಿವೀರ ರ‌್ಯಾಲಿ ಆಡಳಿತ, ಸಂಘಟಿತ ವ್ಯವಸ್ಥೆ ಮತ್ತು ಸೇವಾಭಾವದ ಅಪರೂಪದ ಸಮನ್ವಯಕ್ಕೆ ಸಾಕ್ಷಿಯಾಗಿದೆ. ಇದು ಕೇವಲ ನೇಮಕಾತಿ ಪ್ರಕ್ರಿಯೆಯಲ್ಲ. ಯುವ ಮನಸ್ಸುಗಳಲ್ಲಿ ದೇಶಸೇವೆಯ ಉತ್ಸಾಹ ಮತ್ತಷ್ಟು ಗಟ್ಟಿಗೊಳಿಸಿದ ಮಹತ್ವದ ಅಧ್ಯಾಯವಾಗಿದೆ. ಪುಣ್ಯದ ಕೆಲಸದಲ್ಲಿ ನಮ್ಮ ಸಂಸ್ಥೆಯು ಭಾಗಿಯಾಗಿರುವುದು ನಮ್ಮ ಭಾಗ್ಯ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net