ಪುತ್ತೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನದಲ್ಲಿ ಸರ್ಕಾರಿ ಅಧಿಕಾರಿಗಳು ಕರ್ತವ್ಯಲೋಪ ಎಸಗುತ್ತಿದ್ದಾರೆಂದು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾದರೂ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ರಸ್ತೆ, ಚರಂಡಿ ಸೇರಿ ಸಾರ್ವಜನಿಕ ಸೊತ್ತುಗಳು ಮತ್ತೆ ಮತ್ತೆ ಬಹುಗ್ರಾಮ ಯೋಜನೆಯ ಕಾಮಗಾರಿಗೆ ಆಹುತಿಯಾಗುತ್ತಿದ್ದು, ಇದನ್ನು ದುರಸ್ತಿ ಮಾಡುವವರು ಯಾರೆಂಬ ಪ್ರಶ್ನೆ ಮೂಡುತ್ತಿದೆ. ಈ ಬಗ್ಗೆ ದೂರು ನೀಡಿದರೂ, ಅಽಕಾರಿ ವರ್ಗ ತನಗೂ ಅದಕ್ಕೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದೆ.