

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಕರ್ನಾಟಕ ರಾಜ್ಯಮಟ್ಟದ ಜೂನಿಯರ್, ಸಬ್‌ಜೂನಿಯರ್ (ಬಾಲಕ-ಬಾಲಕಿಯರು, ಸೀನಿಯರ್ (ಪುರುಷ-ಮಹಿಳೆಯರು) ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದೆ.
ಜೂನಿಯರ್, ಸಬ್‌ಜೂನಿಯರ್ ವಿಭಾಗದ ಬಾಲಕ-ಬಾಲಕಿಯರ ಮತ್ತು ಮಹಿಳೆಯರ ಹೀಗೆ ಒಟ್ಟು ಎಲ್ಲಾ 6 ವಿಭಾಗದಲ್ಲಿ ಆಳ್ವಾಸ್ ತಂಡ ಪ್ರಶಸ್ತಿಯನ್ನು ಪಡೆದು ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಬಾಲಕಿಯರ ಸಬ್‌ಜೂನಿಯರ್ ವಿಭಾಗದಲ್ಲಿ ಆಳ್ವಾಸ್‌ನ ಮಾನಸ, ಮಹಿಳಾ ವಿಭಾಗದಲ್ಲಿ ಆಳ್ವಾಸ್‌ನ ತನುಷ ಬೆಸ್ಟ್ ಲಿಪ್ಟ್‌ರ್ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು.
ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ಮತ್ತು ಸುಳ್ಯ ಸ್ಪೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಜರುಗಿದ ವೇಯ್ಟ್ ಲಿಫ್ಟಿಂಗ್ ಪಂದ್ಯವನ್ನು ಆಯೋಜಿಸಲಾಯಿತು. ಸಾಧಕರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.