ಶಿಸ್ತು, ಸೇವಾ ಮನೋಭಾವ ತುಂಬುವ ಸಂಸ್ಥೆ : ಬ್ರೂಸ್ ಫರ್ನಾಂಡಿಸ್

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್‌ಸಿಸಿ ಸಾಧಕರನ್ನು ಸನ್ಮಾನಿಸಲಾಯಿತು. ಬೆಂಗಳೂರು ವಲಯದ ಸೇನಾ ನೇಮಕಾತಿ ಎಡಿಜಿ ಮೇಜರ್ ಜನರಲ್ ಬ್ರೂಸ್ ಫರ್ನಾಂಡಿಸ್, ವೆಂಕಟೇಶ್ ಎಂ.ಮೊದಲಾದವರಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್‌ಸಿಸಿ ಸಾಧಕರನ್ನು ಸನ್ಮಾನಿಸಲಾಯಿತು. ಬೆಂಗಳೂರು ವಲಯದ ಸೇನಾ ನೇಮಕಾತಿ ಎಡಿಜಿ ಮೇಜರ್ ಜನರಲ್ ಬ್ರೂಸ್ ಫರ್ನಾಂಡಿಸ್, ವೆಂಕಟೇಶ್ ಎಂ.ಮೊದಲಾದವರಿದ್ದರು.
Published on

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್‌ಸಿಸಿ ಸಾಧಕರನ್ನು ಗೌರವಿಸುವ ಸಮಾರಂಭ ಸೋಮವಾರ ಇಲ್ಲಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜರುಗಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸೇನಾ, ನೌಕಾ ಹಾಗೂ ವಾಯುಪಡೆ ಎನ್‌ಸಿಸಿ ಘಟಕಗಳು ಕಾರ್ಯಕ್ರಮ ಆಯೋಜಿಸಿದ್ದವು.



ಬೆಂಗಳೂರು ವಲಯದ ಸೇನಾ ನೇಮಕಾತಿ ಎಡಿಜಿ ಮೇಜರ್ ಜನರಲ್ ಬ್ರೂಸ್ ಫರ್ನಾಂಡಿಸ್ ಮಾತನಾಡಿ, ಎನ್‌ಸಿಸಿ ಯುವಜನತೆಯನ್ನು ಶಿಸ್ತು, ಸೇವಾ ಮನೋಭಾವ ಹಾಗೂ ರಾಷ್ಟ್ರ ಪ್ರೇಮದೊಂದಿಗೆ ರೂಪಿಸುವ ಮಹತ್ವದ ಸಂಸ್ಥೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ತಂಡಭಾವನೆ ಮತ್ತು ಜವಾಬ್ದಾರಿಯುತ ನಾಗರಿಕತ್ವ ಬೆಳೆಸುವಲ್ಲಿ ಎನ್‌ಸಿಸಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಒಂದೇ ಕ್ಯಾಂಪಸ್‌ನಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವುದನ್ನು ಶ್ಲಾಘಿಸಿ, ಅಗ್ನಿವೀರ್ ನೇಮಕಾತಿ ರ‌್ಯಾಲಿ ಯಶಸ್ವಿಯಾಗಿ ನಡೆಯಲು ಆಳ್ವಾಸ್ ನೀಡುತ್ತಿರುವ ಸಹಕಾರ ಸ್ಮರಿಸಿದರು.


ರಜೌರಿ ಎನ್‌ಕೌಂಟರ್‌ನಲ್ಲಿ ವೀರಮರಣ ಹೊಂದಿದ ಕ್ಯಾ.ಪ್ರಾಂಜಲ್ ಅವರ ತಂದೆ ವೆಂಕಟೇಶ್ ಎಂ.ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿದ್ದರು. ನವದೆಹಲಿಯ ಗಣರಾಜ್ಯೋತ್ಸವ ಶಿಬಿರದಲ್ಲಿ ಭಾಗವಹಿಸಿದ್ದ ಆರು ಕ್ಯಾಡೆಟ್‌ಗಳು ಹಾಗೂ ಥಲ್ ಸೈನಿಕ್ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದ ಒಬ್ಬ ಕ್ಯಾಡೆಟ್‌ನ್ನು ಸನ್ಮಾನಿಸಲಾಯಿತು. ಮೇಜರ್ ಜನರಲ್ ಬ್ರೂಸ್ ಫರ್ನಾಂಡಿಸ್ ದಂಪತಿ ಹಾಗೂ ವೆಂಕಟೇಶ್ ಎಂ.ಅವರನ್ನು ಗೌರವಿಸಲಾಯಿತು.


ಲೆಫ್ಟಿನೆಂಟ್ ಕರ್ನಲ್ ರೋಹಿತ್ ರಾಯ್, ಕಮಾಂಡರ್ ಲಿಬಿನ್ ಜಾನ್ಸನ್, ವಿಂಗ್ ಕಮಾಂಡರ್ ಪ್ರವೀಣ್ ಕರಿಯಪ್ಪ, ಕರ್ನಲ್ ಜಿ. ಸೋಮು ಮಹಾರಾಜನ್, ಮರ್ಲಿನ್ ಫರ್ನಾಂಡಿಸ್, ಫೆಡರಲ್ ಬ್ಯಾಂಕ್‌ನ ಸಂಜೋ ಜೋಸೆಫ್ ಉಪಸ್ಥಿತರಿದ್ದರು. ಎಎನ್‌ಒಗಳಾದ ಕಿರಣ್, ಧನಂಜಯ ಆಚಾರ್ಯ ಹಾಗೂ ಪ್ರಸಾದ್ ಭಾಗವಹಿಸಿದ್ದರು. ಪವಿತ್ರಾ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net