

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಸ್ವರಾಜ್ಯ ಮೈದಾನದಲ್ಲಿ ನಡೆದ ಮೂಡುಬಿದಿರೆ ತಾಲೂಕುಮಟ್ಟದ 14 ಹಾಗೂ 17 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು 58 ಚಿನ್ನ, 45 ಬೆಳ್ಳಿ ಹಾಗೂ 25 ಕಂಚು ಸೇರಿ ಒಟ್ಟು 128 ಪದಕಗಳನ್ನು ಪಡೆದು ಸಮಗ್ರ ಪ್ರಶಸ್ತಿ ಗಳಿಸಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮೂಡುಬಿದಿರೆ ಹಾಗೂ ಸರ್ಕಾರಿ ಪ್ರೌಢಶಾಲೆ ಹೊಸಬೆಟ್ಟು ಆಶ್ರಯದಲ್ಲಿ ಕ್ರೀಡಾಕೂಟ ನಡೆಯಿತು. ಆಳ್ವಾಸ್ ಶಾಲೆ 14 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ತಂಡ ಪ್ರಶಸ್ತಿ ಹಾಗೂ 17 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ತಂಡ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.
ವೈಯಕ್ತಿಕ ಪ್ರಶಸ್ತಿಗಳಲ್ಲಿ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮಂತನ್ ಪ್ರಥಮ ಹಾಗೂ ಮೋಕ್ಷಿತ್ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ಅಭಿಜ್ಞ ಪ್ರಥಮ ಸ್ಥಾನ ಪಡೆದರು. 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಶುಭಾಶ್ ಪ್ರಥಮ, ಆದಿತ್ಯ ದ್ವಿತೀಯ ಹಾಗೂ ಕೌಶಿಕ್ ಪಿ.ಶೆಟ್ಟಿಗಾರ್ ತೃತೀಯ ಸ್ಥಾನ ಪಡೆದರು. ಬಾಲಕಿಯರ ವಿಭಾಗದಲ್ಲಿ ರಕ್ಷಿತಾ ಮುತ್ತಪ್ಪ ಪ್ರಥಮ ಸ್ಥಾನ ಪಡೆದರು.