ರಾಜಕಾಲುವೆ ಸಮಸ್ಯೆ ಪರಿಹರಿಸಲು ಡಿಸಿಗೆ ಮನವಿ

ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್

ರಾಜಕಾಲುವೆ ದುರಸ್ತಿ ಆಗ್ರಹಿಸಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್‌ನಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ರಮೇಶ್ ಶೆಟ್ಟಿ ಮೊದಲಾದವರಿದ್ದರು.
ರಾಜಕಾಲುವೆ ದುರಸ್ತಿ ಆಗ್ರಹಿಸಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್‌ನಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ರಮೇಶ್ ಶೆಟ್ಟಿ ಮೊದಲಾದವರಿದ್ದರು.
Published on: 

ಗುರುಪುರ: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ವಾರ್ಡ್ 2 ಮತ್ತು 7ರ ಸುಭಾಷಿತ ನಗರದಲ್ಲಿ ದುರಸ್ತಿಯಾಗದ ರಾಜಕಾಲುವೆಯಿಂದ ಸ್ಥಳೀಯ ಜನಜೀವನಕ್ಕೆ ಸಮಸ್ಯೆಯಾಗಿದ್ದು, ತಕ್ಷಣ ಅಭಿವೃದ್ಧಿ ಕಾರ್ಯ ನಡೆಸುವಂತೆ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಒತ್ತಾಯಿಸಿದೆ.

ಸುರತ್ಕಲ್ ಬಂಟರ ಭವನದಲ್ಲಿ ಇತ್ತೀಚೆಗೆ ನಡೆದ ‘ಪ್ರಜಾಸೇವೆ ಆಂದೋಲನ’ದಲ್ಲಿ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಶೆಟ್ಟಿ ಮಳೆಗಾಲದಲ್ಲಿ ಜನವಸತಿ ಪ್ರದೇಶಕ್ಕೆ ತೊಂದರೆಯಾಗದ ರೀತಿಯಲ್ಲಿ ರಾಜಕಾಲುವೆ ದುರಸ್ತಿ ಮಾಡಲು ಆಗ್ರಹಿಸಿ ಜಿಲ್ಲಾಧಿಕಾರಿಯವರಿಗೆ ಮನವಿ ನೀಡಿದರು.

ಇಲ್ಲಿನ ಸಮಸ್ಯೆ ಕುರಿತು ಹಲವು ಬಾರಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಇದುವರೆಗೆ ಸೂಕ್ತ ಸ್ಪಂದನೆ ದೊರೆತಿಲ್ಲ. ಮಳೆಗಾಲದಲ್ಲಿ ರಾಜಕಾಲುವೆಯಿಂದ ನೀರು ಹೊರಗೆ ಹರಿಯದಂತೆ ತಡೆಗೋಡೆ ನಿರ್ಮಿಸಬೇಕು. ಇಲ್ಲವಾದಲ್ಲಿ ಈ ಪ್ರದೇಶದ ಜನಜೀವನದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಮುಂದಿನ ಮಳೆಗಾಲದೊಳಗೆ ಈ ಕಾರ್ಯ ನಡೆಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಬೇಕು ಎಂದು ಶೆಟ್ಟಿ ಮನವಿಯಲ್ಲಿ ತಿಳಿಸಿದ್ದಾರೆ.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ, ಸುರತ್ಕಲ್ ಸುಭಾಷಿತನಗರದ ರಾಜಕಾಲುವೆಯಿಂದ ಮಳೆಗಾಲದಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಪರಿಶೀಲನೆ ನಡೆಸಿ, ಸೂಕ್ತ ಕ್ರಮಕ್ಕೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net