

ಪುತ್ತೂರು ಗ್ರಾಮಾಂತರ: ಗ್ಯಾರಂಟಿ ಯೋಜನೆಯ ಸಂಪೂರ್ಣ ಲಾಭ ಪಡೆಯುತ್ತಿರುವ ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರ ಸುಳ್ಳು ಹೆಚ್ಚು ದಿನ ನಡೆಯುವುದಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅರಿಯಡ್ಕ ವಲಯ ಕಾಂಗ್ರೆಸ್ ವತಿಯಿಂದ ಕೌಡಿಚ್ಚಾರಿನಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಅರಿಯಡ್ಕ ಉತ್ಸವ’ದಲ್ಲಿ ಮಾತನಾಡಿದರು.
ಅರಿಯಡ್ಕ ವಲಯ ಅರಣ್ಯ ಸಮಿತಿ ಮಾಜಿ ಅಧ್ಯಕ್ಷ ರಾಜೀವ್ ರೈ ಕುತ್ಯಾಡಿ ಉದ್ಘಾಟಿಸಿದರು. ಶಾಸಕರು ಎರಡುವರೆ ವರ್ಷದ ಅವಧಿಯಲ್ಲಿ ಅರಿಯಡ್ಕ ಗ್ರಾಮಕ್ಕೆ 5 ಕೋಟಿ ರೂ. ಅನುದಾನ ನೀಡಿರುವ ವಿವರಗಳನ್ನೊಳಗೊಂಡ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಶಾಸಕರನ್ನು ಗೌರವಿಸಲಾಯಿತು. ಐದು ಮಂದಿ ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ಪುಡಾ ಅಧ್ಯಕ್ಷ ಅಮಳ ರಾಮಚಂದ್ರ, ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ, ಅಕ್ರಮ-ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ನಝೀರ್ ಮಠ, ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕ ಅಧ್ಯಕ್ಷ ಮಹಾಲಿಂಗ ನಾಯ್ಕ ನರಿಮೊಗರು, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ನೀರ್ಪಾಡಿ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ರಹಿಮಾನ್ ಆಝಾದ್, ನೆಟ್ಟಣಿಗೆ ಮುಡ್ನೂರು ಗ್ರಾಪಂ ಉಪಾಧ್ಯಕ್ಷ ರಾಮ ಮೇನಾಲ, ಸದಸ್ಯ ಶ್ರೀರಾಮ್ ಪಕ್ಕಳ, ಬಡಗನ್ನೂರು ಗ್ರಾಪಂ ಸದಸ್ಯ ರವಿರಾಜ್ ರೈ ಸಜಂಕಾಡಿ, ಅರಿಯಡ್ಕ ಗ್ರಾಪಂ ಸದಸ್ಯ ಮೋನಪ್ಪ ಪೂಜಾರಿ ಕೆರೆಮಾರು, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನುತಾ, ಪಕ್ಷದ ಪ್ರಮುಖರಾದ ಬೃಜೇಶ್ ಶೆಟ್ಟಿ, ಸತೀಶ್ಚಂದ್ರ ರೈ ಗೋಳ್ತಿಲ, ಇಬ್ರಾಹಿಂ ಗೋಳಿಕಟ್ಟೆ ಮತ್ತಿತರರಿದ್ದರು. ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಪ್ರಾಸ್ತಾವಿಕ ಮಾತನಾಡಿದರು. ಬೂತ್ ಅಧ್ಯಕ್ಷ ಬಶೀರ್ ಕೌಡಿಚ್ಚಾರ್ ವಂದಿಸಿದರು.