ಬಾಲಕನ ಮೇಲೆ ಹಲ್ಲೆ

ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
man thrashed
thrash
Published on: 

ಪುತ್ತೂರು ಗ್ರಾಮಾಂತರ: ಸಂಪ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9ನೇ ತರಗತಿ ವಿದ್ಯಾರ್ಥಿ ಮೇಲೆ ನೆರೆಮನೆಯವರು ಹಲ್ಲೆ ನಡೆಸಿರುವ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.5ರಂದು ಬಾಲಕ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪರಿಚಯದ ಸುಧಾಕರ, ಪೇರಿಗೇರಿ ಚಂದ್ರ ಹಾಗೂ ಹರೀಶ್ ಎಂಬುವರು ರಸ್ತೆಬದಿ ನಿಂತು ಅವಾಚ್ಯವಾಗಿ ಬೈದಿದ್ದಾರೆ. ಬಳಿಕ ಸುಧಾಕರ, ಹರೀಶ್, ಪೇರಿಗೇರಿ ಚಂದ್ರ, ವಸಂತಿ, ಮೋಹನ್, ಗೋವಚಂದ್ರ, ಟಿ.ಸಿ.ಚಂದ್ರ, ಪ್ರಮೀಳಾ ಹಾಗೂ ಸುಮಾ ಬಾಲಕನ ಮನೆಯ ಅಂಗಳಕ್ಕೆ ತೆರಳಿ ಗಲಾಟೆ ವಾಡಿ ಹಲ್ಲೆ ಮಾಡಿದ್ದಾರೆ. ಜಗಳ ಬಿಡಿಸಲು ಹೋದ ಬಾಲಕನ ತಾಯಿ ಹಾಗೂ ತಂಗಿಯನ್ನೂ ದೂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.