ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಪಿ ಅವರಿಗೆ ಡಾಕ್ಟ್ರರೇಟ್ ಪದವಿ

ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಪಿ ಅವರಿಗೆ ಡಾಕ್ಟ್ರರೇಟ್ ಪದವಿ
ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಪಿ ಅವರಿಗೆ ಡಾಕ್ಟ್ರರೇಟ್ ಪದವಿ
Published on
ಮಂಗಳೂರು: ರಥಬೀದಿ ಡಾ. ಪಿ ದಯಾನಂದ ಪೈ - ಪಿ ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಪಿ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.
ಇವರು ಮಂಗಳೂರು ವಿಶ್ವ ವಿದ್ಯಾನಿಲಯದ ಇತಿಹಾಸ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ತ್ರಿವೇಣಿ ಅರಸ್ ಅವರ ಮಾರ್ಗದರ್ಶನದಲ್ಲಿ ತುಳುನಾಡಿನ ಗುತ್ತುಗಳು: ಇತಿಹಾಸ, ಸಂಸ್ಕೃತಿ ಮತ್ತು ಸ್ಥಿತ್ಯಂತರಗಳು ಎಂಬ ವಿಷಯವಾಗಿ ಪ್ರಬಂಧ ಮಂಡಿಸಿದ್ದರು. ಇವರು ಹರೇಕಳ ಮಣಿಬೆಟ್ಟುಗುತ್ತು ಅರುಣ್ ಕುಮಾರ್ ಕಾಜವರವರ ಪತ್ನಿ. ಮಾ.28ರಂದು ಮಂಗಳೂರು ವಿವಿ ಮಂಗಳ ಸಭಾಂಗಣದಲ್ಲಿ ನಡೆಯಲಿರುವ 44ನೇ ಘಟಿಕೋತ್ಸವದಲ್ಲಿ ಪಿಎಚ್.ಡಿ ಪದವಿ ಪ್ರಧಾನ ನೆರವೇರಲಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net