ಕಕ್ವ ಶಾಲೆ ವಠಾರಕ್ಕೆ ಬೇಕು ಸರ್ಕಾರಿ ಬಸ್ಸು : ಹಲವು ಸಮಸ್ಯೆ ಪರಿಹಾರಕ್ಕೆ ವಿದ್ಯಾರ್ಥಿಗಳ ಪಟ್ಟು

ಅತಿಕಾರಿಬೆಟ್ಟು ಗ್ರಾಪಂ ವ್ಯಾಪ್ತಿಯ ಮಕ್ಕಳ ಗ್ರಾಮ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಮುಖ್ಯಶಿಕ್ಷಕ ನಾಗಭೂಷಣ್ ರಾವ್ ಮಾತನಾಡಿದರು.
ಅತಿಕಾರಿಬೆಟ್ಟು ಗ್ರಾಪಂ ವ್ಯಾಪ್ತಿಯ ಮಕ್ಕಳ ಗ್ರಾಮ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಮುಖ್ಯಶಿಕ್ಷಕ ನಾಗಭೂಷಣ್ ರಾವ್ ಮಾತನಾಡಿದರು.
Published on
ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷೆ ಶಶಿಕಲಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಭಾರತಿ, ಮೂಲ್ಕಿ ಪೊಲೀಸ್ ಠಾಣೆ ಸಹಾಯಕ ಉಪನಿರೀಕ್ಷಕ ಹರಿಶೇಖರ್, ಸಿಎಚ್‌ಒ ವಿಲ್ಮಾ, ಕೆಪಿಎಸ್‌ಕೆ ಹೈಸ್ಕೂಲ್‌ನ ಮುಖ್ಯ ಅಧ್ಯಾಪಕ ವೆಂಕಟರಮಣ ಕಾಮತ್ ಹಾಗೂ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಮತ್ತು ಗ್ರಾಪಂ ಸದಸ್ಯರಾದ ಗೀತಾ ಜಯಕುಮಾರ್, ಪದ್ಮಿನಿ ವಿ ಶೆಟ್ಟಿ, ಮಕ್ಕಳ ಪಾಲಕರು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೈಲಜಾ ಸ್ವಾಗತಿಸಿದರು, ಕಾರ್ಯದರ್ಶಿ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.
ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಮಕ್ಕಳು ಹಿರಿಯರಿಗೆ ಗೌರವ ನೀಡುವ ಜತೆಗೆ ಉತ್ತಮ ಸಂಸ್ಕಾರ ಪ್ರಾಮಾಣಿಕತೆ ಬೆಳೆಸಿಕೊಳ್ಳವ ಮೂಲಕ ಉತ್ತಮ ನಾಗರಿಕರಾಗಿ ಬೆಳೆಯಬೇಕು. ಮಕ್ಕಳ ಗ್ರಾಮಸಭೆ ಗ್ರಾಮೀಣ ಆಡಳಿತ ವ್ಯವಸ್ಥೆಯೊಳಗೆ ಮಕ್ಕಳ ಧ್ವನಿಯನ್ನು ಪರಿಣಾಮಕಾರಿಯಾಗಿ ಬಳಸಲು ಮತ್ತು ಸರ್ಕಾರಕ್ಕೆ ತಿಳಿಸಲು ಅತ್ಯಂತ ಸೂಕ್ತ ವೇದಿಕೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net