ಬೆಳಗ್ಗೆ 9 ಗಂಟೆ ವೇಳೆಗೆ ಉರ್ವಸ್ಟೋರ್ ಜಂಕ್ಷನ್‌ನಲ್ಲಿ ಕೂಲಿ ಕೆಲಸಕ್ಕೆಂದು ನಿಂತಿದ್ದ ಹೊರ ಜಿಲ್ಲೆಯ ಸುಮಾರು 35 ವರ್ಷದ ಮಹಿಳೆಯನ್ನು ಕೆಲಸ ಇದೆ ಎಂದು ನಂಬಿಸಿ ಬಸ್ಸಿನಲ್ಲಿ ಲಾಲ್ ಬಾಗ್ ಗೆ ಕರೆದುಕೊಂಡು ಬಂದಿದ್ದಾನೆ. ಪಂಪ್‌ಹೌಸ್ ಬಳಿಯ ಹಳೇ ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಬೊಬ್ಬೆ ಹಾಕಿದಾಗ ಸ್ಥಳೀಯರು ಒಟ್ಟಾಗಿದ್ದು, ಈ ವೇಳೆ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಮಹಿಳೆಯ ಕೈಗೆ ಗಾಯವಾಗಿದೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.