ಬಂಟ್ವಾಳ ಮನರೇಗಾ ಬಚಾವ್ ಪಾದಯಾತ್ರೆ

 ಮನರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆ ಬಿ.ಸಿ.ರೋಡಿನಲ್ಲಿ ನಡೆಯಿತು. ಪ್ರಮುಖರಾದ ಬಿ.ರಮಾನಾಥ ರೈ, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್ ಮೊದಲಾದವರಿದ್ದರು.
ಮನರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆ ಬಿ.ಸಿ.ರೋಡಿನಲ್ಲಿ ನಡೆಯಿತು. ಪ್ರಮುಖರಾದ ಬಿ.ರಮಾನಾಥ ರೈ, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್ ಮೊದಲಾದವರಿದ್ದರು.
Published on
ಬಂಟ್ವಾಳ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ಬದಲಿಸಿರುವುದನ್ನು ಖಂಡಿಸಿ ಹಾಗೂ ಕಾಯ್ದೆ ಮರು ಜಾರಿಗೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಫೆ.9ರಿಂದ ಫೆ.12ರವರೆಗೆ ಸುಳ್ಯದಿಂದ ಮೂಲ್ಕಿವರೆಗೆ ನಡೆಯಲಿರುವ ಮನರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆ ಬುಧವಾರ ಮಾಜಿ ಸಚಿವ ಬಿ.ರಮಾನಾಥ ರೈ ನೇತತ್ವದಲ್ಲಿ ಬಂಟ್ವಾಳ ತಾಲೂಕಿನಲ್ಲಿ ನಡೆಯಿತು.
ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾಣಿಯಿಂದ ಪಾದಾಯಾತ್ರೆಯಲ್ಲಿ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ವಿಶ್ರಾಂತಿ ಪಡೆದು ಸಂಜೆ 4 ಗಂಟೆ ವೇಳೆಗೆ ಮತ್ತೆ ಮಂಗಳೂರಿನತ್ತ ಹೆಜ್ಜೆಯನ್ನು ಹಾಕಿದರು. ಕೇಂದ್ರ ಸರ್ಕಾರದ ವಿರುದ್ಧ ೋಷಣೆಯನ್ನು ಕೂಗಿಕೊಂಡು ಮುನ್ನಡೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net