

ಬೆಳ್ತಂಗಡಿ: ವೇಣೂರು ಗ್ರಾಮದ ಮೂಡುಕೋಡಿ ಪಂಜಲಬೈಲು ಎಂಬಲ್ಲಿ ಆಟೋ ಮತ್ತು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ, ಪೆರಾಡಿ ಗ್ರಾಮದ ಅಲೆಕ್ಕಿ ದಿ.ಕೊರಗಪ್ಪ ಕುಲಾಲ್ ಎಂಬುವರ ಪುತ್ರ ಸ್ವಸ್ತಿಕ್(26) ಮೃತಪಟ್ಟಿದ್ದಾರೆ. ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ತಕ್ಷಣ ಅವರನ್ನು ಆಸ್ಪತ್ರೆ ಕರೆದೊಯ್ದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮನೆಯ ಆಧಾರಸ್ತಂಭವಾಗಿದ್ದ ಸ್ವಸ್ತಿಕ್ ವೇಣೂರಿನ ಚಿನ್ನದ ಅಂಗಡಿಯೊಂದರಲ್ಲಿ ಶಾಖಾ ವ್ಯವಸ್ಥಾಪಕರಾಗಿದ್ದರು. ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.