ವಸಂತ ಬಂಗೇರ ಸ್ಮರಣಾರ್ಥ ರಕ್ತದಾನ ಶಿಬಿರ

ಮಾಜಿ ಶಾಸಕ ದಿ.ಕೆ.ವಸಂತ ಬಂಗೇರ ಅವರ 80ನೇ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರವನ್ನು ಈಶ್ವರ ಭಟ್ ಮಾಯಿಲ್ತೋಡಿ ಉದ್ಘಾಟಿಸಿದರು.
ಮಾಜಿ ಶಾಸಕ ದಿ.ಕೆ.ವಸಂತ ಬಂಗೇರ ಅವರ 80ನೇ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರವನ್ನು ಈಶ್ವರ ಭಟ್ ಮಾಯಿಲ್ತೋಡಿ ಉದ್ಘಾಟಿಸಿದರು.
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಮಾಜಿ ಶಾಸಕ ದಿ.ಕೆ.ವಸಂತ ಬಂಗೇರ ಅವರ 80ನೇ ಹುಟ್ಟುಹಬ್ಬ ಪ್ರಯುಕ್ತ ಕೆ.ವಸಂತ ಬಂಗೇರ ಅಭಿಮಾನಿಗಳ ಸಮಿತಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ 8ನೇ ವರ್ಷದ ರಕ್ತದಾನ ಶಿಬಿರ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ಸೋಮವಾರ ನಡೆಯಿತು.



ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರಾಜೇಶ್ವರಿ ಚೇತನ್ ವಸಂತ ಬಂಗೇರ ಜೀವನ ಸಾಧನೆ ಕುರಿತು ವಿಶ್ಲೇಷಿಸಿದರು. ಅಭಿಮಾನಿಗಳ ಸಮಿತಿ ಅಧ್ಯಕ್ಷ ಈಶ್ವರ ಭಟ್ ಮಾಯಿಲ್ತೋಡಿ ಅಧ್ಯಕ್ಷತೆ ವಹಿಸಿದ್ದರು.


ವಸಂತ ಬಂಗೇರ ಅವರ ಪತ್ನಿ ಸುಜಿತಾ ವಿ.ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬಂಗೇರರ ಪುತ್ರಿ ಪ್ರೀತಿತಾ ಧರ್ಮವಿಜೇತ್, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಾಜಿ ಅಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ, ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಜಿ.ಪಂ. ಇಂಜಿನಿಯರಿಂಗ್ ವಿಭಾಗದ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿ.ಆರ್.ನರೇಂದ್ರ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಜಿ.ಪಂ. ಮಾಜಿ ಸದಸ್ಯ ಕೆ.ಕೆ.ಶಾಹುಲ್ ಹಮೀದ್, ವೆನ್ಲಾಕ್ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಿತಾ, ರಕ್ತನಿಧಿ ಘಟಕದ ಮೇಲ್ವಿಚಾರಕ ಅಶೋಕ್, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಸಮಿತಿ ಕೋಶಾಧಿಕಾರಿ ಶೇಖರ್ ಕುಕ್ಕೇಡಿ, ಉಪಾಧ್ಯಕ್ಷ ಲೋಕೇಶ್ ಗೌಡ ಉಪಸ್ಥಿತರಿದ್ದರು.

ಮನೋಹರ್ ಕುಮಾರ್ ಸ್ವಾಗತಿಸಿದರು. ಶಿವಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಇಸ್ಮಾಯಿಲ್ ಕೆ.ಪೆರಿಂಜೆ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net