ಲಾರಿಗೆ ಬೈಕ್ ಡಿಕ್ಕಿಯಾಗಿ ಬಾಲಕ ಸಾವು

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ACCIDENT
ACCIDENT
Published on: 

ಬಂಟ್ವಾಳ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಅವ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್.(14) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಶನಿವಾರ ರಾತ್ರಿ ಸುವಾರು 9 ಗಂಟೆಗೆ ಸುಚಿನ್ ಬೈಕ್‌ನಲ್ಲಿ ಬೆಂಜನಪದವಿನಿಂದ ಪೊಳಲಿ ಕಡೆಗೆ ತೆರಳುತ್ತಿದ್ದಾಗ ಕಲ್ಪಣೆ ಸಮೀಪ ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಮೃತ ಸುಚಿನ್ 9ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಎಸ್‌ಐ ಆದರ್ಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.