ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೇಣೂರು ಕೆ.ಲಕ್ಷ್ಮೀನಾರಾಯಣ ಕಾರಂತ ಅವರ ಬ್ರಹ್ಮಕಲಶೋತ್ಸವ ನಡೆಯಲಿದೆ. 20ರಂದು ಬೆಳಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ನಂತರ ಕಾರ್ಯಾಲಯ ಉದ್ಘಾಟನೆ ನಡೆಯಲಿದೆ. ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಸಂಜೆ 4.30ರಿಂದ ಹೊರೆಕಾಣಿಕೆ ಮೆರವಣಿಗೆ, ರಾತ್ರಿ 7ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಪ್ರಜ್ವಲನೆ ಮಾಡುವರು. ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಧ್ಯಕ್ಷ ಅತುಲ್ ಕುಮಾರ್ ಕೆ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ 9ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.